ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಕೊಲೆ ಮಾಡುತ್ತಿದ್ದ ಗ್ಯಾಂಗ್ ನ ಸದಸ್ಯನನ್ನು ಸದಸ್ಯನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.
ಈ ಗ್ಯಾಂಗ್ ನವರು ಆರು ವರ್ಷದಿಂದ ಒಂಟಿಯಾಗಿ ಓಡಾಡುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಕೊಲೆ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.
2013ರಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಈ ಗ್ಯಾಂಗ್ ಕೈವಾಡ ವಿತ್ತು ಎಂಬ ಸುಳಿವು ಬೇರೊಂದು ಕೊಲೆ ಪ್ರಕರಣವನ್ನು ತನಿಖೆ ಮಾಡುವಾಗ ಪೊಲೀಸರಿಗೆ ದಕ್ಕಿತ್ತು. ನಂತರ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ 6 ವರ್ಷದ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಗ್ಯಾಂಗ್ ಚಿನ್ನಕ್ಕಾಗಿ ಸಾಕಷ್ಟು ಕೊಲೆಗಳನ್ನು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.. ಇವರು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿದ್ದರು. ಇಬ್ಬರು ಕೊಲೆ ಮಾಡಿದ್ದ ಆರೋಪಿಗಳಾಗಿದ್ದು, ಅವರಲ್ಲಿ ಒಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಸದ್ಯಕ್ಕೆ ನಾವು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದೇವೆ. ಇವರಿಬ್ಬರು ರಾಜರಾಜೇಶ್ವರಿನಗರದಲ್ಲಿ ವಯೋವೃದ್ಧೆ ಸೇರಿದಂತೆ ನಗರದ ಅನೇಕ ಕಡೆ ಸಾಕಷ್ಟು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.