ಆರು ಬಾರಿ ಶಾಸಕರಾಗಲು ಮುಸ್ಲಿಂ ಸಮುದಾಯದ ಜಾತ್ಯತೀತ ನಿಲುವು ಕಾರಣ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಲ್ಲಾ ಕೃಪೆಯಿಂದ ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಆರು ಬಾರಿ ಶಾಸಕನಾಗಲು ಸಾಧ್ಯವಾಗಿದೆ. ಯಾವುದೇ ಧರ್ಮ, ಜಾತಿ ಮಿತಿಗೆ ಒಳಗಾಗದೇ ಮತ ಹಾಕಿರುವ ಕ್ಷೇತ್ರದ ಜನರ ಋಣ ತೀರಿಸಲು ನನಗೆ ಈ ಜನ್ಮದಲ್ಲಿ ಸಾಧ್ಯವಿಲ್ಲ ಎಂದಿದ್ದಾರೆ.
ತಮ್ಮ ಸಮುದಾಯದ ವ್ಯಕ್ತಿ ಕಣಕ್ಕೆ ನಿಂತಿದ್ದಾರೆಂದು ಮತ ಹಾಕಿದ್ದರೆ ಮಾಜಿ ಶಾಸಕನಾಗುತ್ತಿದ್ದೆ ಎಂದಿರುವ ರಮಾನಾಥ ರೈ ಅವರ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿದ್ದು, ಮುಸ್ಲಿಂ ಜನಾಂಗದವರು ಮಾತ್ರ ಓಟುಗಳಿಂದ ಗೆದ್ದಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.