Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಧಾರವಾಡ : ಮಸೀದಿಗಳಲ್ಲಿ ಹಾಕಲಾಗಿರುವ ಮೈಕ್ ಬಗ್ಗೆ ಕಳೆದ 6 ತಿಂಗಳ ಹಿಂದೆ ತಹಶೀಲ್ದಾರರಿಗೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದ್ದೆವು.
ಆ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ವಿಚಾರಣೆ ಮಾಡಲು ಇಂದು ಧಾರವಾಡ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದ್ದೆವು.
ಆದರೆ ಅಲ್ಲಿನ ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ಈ ಕಚೇರಿಗೆ ಬೀಗ ಹಾಕಬೇಕಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಇಂದು ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ನಿಸ್ಸಹಾಯಕರಾಗಿ ಮಾತನಾಡಿದ್ದಾರೆ.
ಅವರು ಮಸೀದಿಗಳಲ್ಲಿನ ಮೈಕ್ಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಬಳಿ ಸಿಬ್ಬಂದಿ ಇಲ್ಲ, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ ಹಾರಿಕೆ ಉತ್ತರ ನೀಡಿದ್ದಾರೆ. ನಾವು ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುತ್ತೇವೆ ಎಂದಾಗ ಆ ರೀತಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ .