Select Your Language

Notifications

webdunia
webdunia
webdunia
webdunia

‘ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ, ಕೊಲೆ’

My husband's death is not suicide
ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ, ಕೊಲೆಯಾಗಿದ್ದು ಗಂಡನ ಸಾವಿಗೆ ಕಾರಣವಾದ ಈಶ್ವರಪ್ಪನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಬೆಳಗಾವಿಯಲ್ಲಿ ಮೃತ ಸಂತೋಷ ಪತ್ನಿ ಜಯಶ್ರೀ ಪಾಟೀಲ್ ಕಿಡಿಕಾರಿದ್ದಾರೆ. ಈಶ್ವರಪ್ಪ ಕೇಳಿರುವ ಕಮಿಷನ್ ಬಗ್ಗೆ ನನ್ನ ಮುಂದೆ ಹೇಳಿಕೊಂಡಿದ್ದರು. 4 ಕೋಟಿ ಕಾಮಗಾರಿ ಮಾಡಿದ್ದೇನೆ. ಈಶ್ವರಪ್ಪ 40% ಕಮಿಷನ್ ಕೇಳುತ್ತಿದ್ದಾರೆ. 40% ಕಮಿಷನ್ ಕೊಟ್ಟರೆ ನಾನು ಸಂಪೂರ್ಣ ಹಾಳಾಗುತ್ತೇನೆ ಎನ್ನುತ್ತಿದ್ದರು. ಮೈಮೇಲೆ ಇದ್ದ ಬಂಗಾರ ಅಡವಿಟ್ಟು 108 ಕಾಮಗಾರಿ ಮಾಡಿಸಿದರು. ಬಿಲ್ ಬಂದ ಮೇಲೆ ಬಂಗಾರ ಆಭರಣಗಳನ್ನು ಬಿಡಿಸಿ ಕೊಡುತ್ತೇನೆ ಅಂತಾ ಹೇಳಿದ್ರು.. ಆತ್ಮಹತ್ಯೆಗೂ ಮುನ್ನ ಸಂಜೆ 7 ಗಂಟೆಗೆ ಫೋನ್​​ನಲ್ಲಿ ಚೆನ್ನಾಗಿಯೇ ಮಾತನಾಡಿದ್ದರು..ಬೆಳಗ್ಗೆ ಫೋನ್ ಮಾಡಿದರೆ ಫೋನ್ ರಿಸೀವ್ ಮಾಡಲಿಲ್ಲ. ಬೇರೆಯವರ ಮೂಲಕ ಆತ್ಮಹತ್ಯೆ ವಿಷಯ ಗೊತ್ತಾಯಿತು ಎಂದು ಕಣ್ಣೀರು ಹಾಕಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಲಾರಿ-ಬೈಕ್ ನಡುವೆ ಡಿಕ್ಕಿ, ಇಬ್ಬರ ಸಾವು