Webdunia - Bharat's app for daily news and videos

Install App

ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಹೆಸರು ನಾಮಕರಣಕ್ಕೆ ಮೈಸೂರು ಪಾಲಿಕೆ ಚಿಂತನೆ: ಹೋರಾಟದ ಎಚ್ಚರಿಕೆ

Sampriya
ಮಂಗಳವಾರ, 24 ಡಿಸೆಂಬರ್ 2024 (19:43 IST)
ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಯೊಂದಕ್ಕೆ ನಾಮಕರಣ ಮಾಡಲು ಚಿಂತನೆ ನಡೆಸಿದ್ದು, ಇದಕ್ಕೆ ಆಕ್ಷೇಪ ನಾಗರಿಕರಿಂದ ವ್ಯಕ್ತವಾಗಿದೆ.

ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡಲು ಪಾಲಿಕೆ ಚಿಂತನೆ ನಡೆಸಿದೆ. ಅದಕ್ಕಾಗಿ ಪತ್ರಿಕಾ ಜಾಹಿರಾತು ಕೂಡ ನೀಡಿದೆ. ಕೆಆರ್‌ಎಸ್ ರಸ್ತೆಯಲ್ಲಿ ಹೆಚ್ಚಿನ ಆಸ್ಪತ್ರೆಗಳಿವೆ. ಹೀಗಾಗಿ, ಆ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಹೆಸರು ಇಡಲು ಮುಂದಾಗಿದೆ.

ಆದರೆ, ಪಾಲಿಕೆಯ ಈ ನಿಲುವಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ನಾನು ಮಾಡಿರುವ ಆರೋಪದಲ್ಲಿ ಸಿದ್ದರಾಮಯ್ಯ ಎ1 ಆರೋಪಿ ಆಗಿದ್ದಾರೆ. ಅಂತಹ ಆರೋಪಿ ಹೆಸರನ್ನು ಮೈಸೂರಿನ ಪ್ರಮುಖ ರಸ್ತೆಗೆ ಇಡಲು ಹೊರಟಿರೋದು ವಿಷಾದನೀಯ ಎಂದು ಟೀಕಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿಗೆ ಅರಸರು ಕೊಟ್ಟಿರುವ ಕೊಡುಗೆ ಮನಗಾಣಬೇಕು. ಆ ರಸ್ತೆಯಲ್ಲಿ ಕೆಂಪಜಮಣಿ ಕ್ಷಯರೋಗ ಆಸ್ಪತ್ರೆ ಕೂಡ ಇದೆ. ಮೊದಲಿಂದ ಅದನ್ನು  ಪಿ.ಕೆ.ಟಿ.ಬಿ ರಸ್ತೆ ಅಂತಲೇ ಕರೆಯುತ್ತಾರೆ. ಅಂತಹ ಐತಿಹಾಸಿಕ ರಸ್ತೆಗೆ ಗುರುತರ ಆರೋಪ ಹೊತ್ತಿರುವ ವ್ಯಕ್ತಿ ಹೆಸರಿಡುತ್ತಿರುವುದು ಸರಿಯಲ್ಲ. ಇದರ ವಿರುದ್ಧವೂ ಹೋರಾಟ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments