ಮೈಸೂರು : ಇಂದು ನಡೆಯಲಿರುವ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ.
ಮೈಸೂರು ಜಿ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಅದಕ್ಕಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮುಂದುವರಿಸುವುದಾಗಿ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ಹೇಳಿಕೆ ನೀಡಿದ್ದರು.
ಆದರೆ ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಮತ್ತು ಸಚಿವ ಸಾರಾ ಮಹೇಶ್ ಗೆ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟು ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ದರಿಂದ ಇಂದು ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್ ಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್ಗೆ ಉಪಾಧ್ಯಕ್ಷ ಸ್ಥಾನ ಎಂದು ನಿರ್ಣಯಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.