Select Your Language

Notifications

webdunia
webdunia
webdunia
webdunia

ಮೈಸೂರಿನ ಅಂದಗೆಡಿಸಿ ವಿಕೃತಿ ಮೆರೆದ ಆಟೋಚಾಲಕ!

ಅಲಂಕಾರ
ಮೈಸೂರಿನ ಹಾರ್ಡಿಂಗ್ ವೃತ್ತದಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಪಾದಚಾರಿ ಮಾರ್ಗದಲ್ಲಿ ಅಲಂಕಾರಿಕ ತಡೆಗೋಡೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಸುಮಾರು ಎರಡು ಮೀಟರ್ ಉದ್ದದ ಕಟಾಂಜಗಳನ್ನು ಧ್ವಂಸ ಮಾಡಲಾಗಿದೆ. ಇಂದು ಬೆಳಿಗ್ಗೆ ನಡೆದ ಘಟನೆ ಇದಾಗಿದೆ.
ಪಾದಚಾರಿ ಮಾರ್ಗದಲ್ಲಿ ಗೂಡ್ಸ್ ಆಟೋ ತಂದು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ತಡೆಗೋಡೆ ಧ್ವಂಸಗೊಳಿಸಿ ತರಾತುರಿಯಲ್ಲಿ ಪರಾರಿಯಾಗಲು ಪ್ರಯತ್ನ ಮಾಡಿದ ಆಟೋಚಾಲಕ ಸಿಕ್ಕಿಬಿದ್ದಿದ್ದಾನೆ.
ಇದೇ ಸಂದರ್ಭದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ವಚ್ಛ ಸರ್ವೇಕ್ಷಣೆ ತಂಡ ಮೈಸೂರಿಗೆ ಆಗಮಿಸಿರುವ ಸಂದರ್ಭದಲ್ಲಿ ನಗರದ ಅಂದವನ್ನು ಚಾಲಕ ಕೆಡಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ದೇವರಾಜ ಸಂಚಾರ ಪೋಲಿಸರು ಆಟೋ ಚಾಲಕ ಹಾಗೂ ಆಟೋ ವಶಕ್ಕೆ ಪಡೆದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ