ಅಶ್ಲೀಲ ವೆಬ್‌ಸೈಟ್‌ನಲ್ಲಿ ಮೈಸೂರು ವಿವಿ ವಿದ್ಯಾರ್ಥಿನಿಯರ ಫೋಟೋಗಳು ಪತ್ತೆಯಾಗಿದ್ದು, ವಿದ್ಯಾರ್ಥಿನಿಯರ ಮೊಬೈಲ್ ನಂಬರ್‌ಗಳನ್ನು ಹಾಕಿದ ಹೇಯ ಘಟನೆ ವರದಿಯಾಗಿದೆ.
ವಿದ್ಯಾರ್ಥಿನಿಯರ ಫೋಟೋಗಳು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ್ದರಿಂದ, ಕೆಲ ವಿಕೃತ ವ್ಯಕ್ತಿಗಳು ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಫೋನ್ ಕರೆಗಳನ್ನು ಮಾಡಿ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ತಿಳಿಸಿದ್ದಾರೆ.
ಅಶ್ಲೀಲ ವೆಬ್‌ಸೈಟ್‌ಗಲ್ಲಿ ತಮ್ಮ ಫೋಟೋ ಕಾಣಿಸಿಕೊಂಡಾಗಿನಿಂದ ಆಘಾತಗೊಂಡ ವಿದ್ಯಾರ್ಥಿನಿಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.