Select Your Language

Notifications

webdunia
webdunia
webdunia
webdunia

ನಾಗಮಂಗಲ ಗಲಭೆ, ಕಾನೂನುಗಿಂತ ಯಾರು ದೊಡ್ಡವರಲ್ಲ: ಜಿ ಪರಮೇಶ್ವರ್

ನಾಗಮಂಗಲ ಗಲಭೆ, ಕಾನೂನುಗಿಂತ ಯಾರು ದೊಡ್ಡವರಲ್ಲ: ಜಿ ಪರಮೇಶ್ವರ್

Sampriya

ಮಂಡ್ಯ , ಶುಕ್ರವಾರ, 13 ಸೆಪ್ಟಂಬರ್ 2024 (15:47 IST)
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿಯಲ್ಲಿ ಪಟ್ಟಣ ಪೊಲೀಸ್ ಇನ್‌ಸ್ಪೆಕ್ಟರ್‌ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.

ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಅರಗ ಜ್ಞಾನೇಂದ್ರ ಕಠಿಣ ಕ್ರಮದ ಗೃಹಸಚಿವರು, ಪರಮೇಶ್ವರ್ ಆಕಸ್ಮಿಕ ಗೃಹಸಚಿವರು