Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

Good News: ನಾಳೆಯಿಂದ ನಾಗಸಂದ್ರ ಮಾದಾವರ ಮೆಟ್ರೋ ಸೇವೆ ಆರಂಭ

Good News: ನಾಳೆಯಿಂದ ನಾಗಸಂದ್ರ ಮಾದಾವರ ಮೆಟ್ರೋ ಸೇವೆ ಆರಂಭ

Sampriya

ಬೆಂಗಳೂರು , ಬುಧವಾರ, 6 ನವೆಂಬರ್ 2024 (17:23 IST)
Photo Courtesy X
ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದ ಗ್ರೀನ್ ಲೈನ್ ನ ನಾಗಸಂದ್ರದಿಂದ ಮಾದಾವರ ವರೆಗಿನ 3.14-ಕಿಮೀ. ವಿಸ್ತರಿತ ಮಾರ್ಗದಲ್ಲಿ ನಾಳೆಯಿಂದ ಮೆಟ್ರೋ ಸೇವೆ ಆರಂಭಗೊಳ್ಳಲಿದೆ.

ಈ ಬಗ್ಗೆ ಅಧಿಕಾರಿಗಳು ಇಂದು ತಿಳಿಸಿದರು. ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೆಟ್ರೋ ಮಾರ್ಗವನ್ನು ಪರಿಶೀಲಿಸಿದರು ಮತ್ತು ಯಶವಂತಪುರ ಮೆಟ್ರೋ ನಿಲ್ದಾಣದಿಂದ ಮಾದಾವರದವರೆಗೆ ಪ್ರಯಾಣಿಸುವ ಮೂಲಕ ನಾಗಸಂದ್ರ - ಮಾದಾವರದವರೆಗಿನ ವಿಸ್ತರಿತ ಮಾರ್ಗಕ್ಕೆ ಪ್ರಾಯೋಗಿಕ ಚಾಲನೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು. ಸದ್ಯ ನಾಗಸಂದ್ರ ನಿಲ್ದಾಣದವರೆಗೂ ಹಸಿರು ಮಾರ್ಗ ಇದ್ದು, ನಾಗಸಂದ್ರದಿಂದ‌ ಮಾದಾವರವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಬೆಂಗಳೂರು ಹೊಂದಿದೆ. ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದೆ. 2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ತಿಳಿಸಿದೆ. ಈ ವೇಳೆ ಸಂಸದರಾದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕರಾದ ಶ್ರೀ ಎಂ. ಶ್ರೀನಿವಾಸ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

US Election: ಕಮಲಾ ಹ್ಯಾರಿಸ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ತಮಿಳುನಾಡಿನ ಪೂರ್ವಜನರ ಗ್ರಾಮದ ಜನರಿಗೆ ನಿರಾಸೆ