Publish Date: Mon, 22 Jul 2019 (10:29 IST)
Updated Date: Mon, 22 Jul 2019 (10:31 IST)
ಬೆಂಗಳೂರು : ಇಂದು ನಡೆಯುವ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಗೈರು ಹಾಜರಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ವಿಧಾನಸಭೆಯಲ್ಲಿ ಇಂದು ನಡೆಯುವ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿರ್ಧಾರ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅನಾರೋಗ್ಯ ದ ಕಾರಣ ಇಂದು ಸದನಕ್ಕೆ ಗೈರಾಗಲಿದ್ದಾರೆ ಎನ್ನಲಾಗಿದೆ.
ನಾಗೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು,. ಅವರಿಗೆ ಇಂದು ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಗೇಂದ್ರ ಇರುವ ಆಸ್ಪತ್ರೆ ವಾರ್ಡ್ ಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.