ನಗ್ನ ವಿಡಿಯೋ ಆಂಟಿ ಆಪತ್ತು..!!

Webdunia
ಸೋಮವಾರ, 19 ಸೆಪ್ಟಂಬರ್ 2022 (16:28 IST)
ತಾಡೇಪಲ್ಲಿ ಪೊಲೀಸರ ಪ್ರಕಾರ, ಯುವಕ ತಾಡೇಪಲ್ಲಿಯ ಬಹುಮಹಡಿ ಕಟ್ಟಡದಲ್ಲಿ ತಂಗಿದ್ದು, ನಗರದ ವಿಶ್ವವಿದ್ಯಾಲಯವೊಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾನೆ. ವಿದ್ಯಾರ್ಥಿಗೆ (20 ವರ್ಷ) ಅಪರಿಚಿತ ಮಹಿಳೆಯಿಂದ ಕರೆ ಬಂದಿದೆ. ಬಳಿಕ ಇಬ್ಬರು ಗಂಟೆಗಟ್ಟಲೆ ಮಾತನಾಡುತ್ತಿದ್ದರು. ಮಾತಿನಲ್ಲೇ ಯುವಕನನ್ನು ಮಹಿಳೆ ಬಲೆಗೆ ಕೆಡವಿದ್ದಾಳೆ ಎನ್ನಲಾಗಿದೆ.
 
ಫೋನ್​ನಲ್ಲಿ ಮಾತನಾಡುತ್ತಾ ನಗ್ನ ವಿಡಿಯೋ ತೆಗೆದು ಕಳುಹಿಸುವಂತೆ ಯುವಕನಿಗೆ ಮಹಿಳೆ ಕೇಳಿದ್ದಾಳೆ. ಆತ ತನ್ನ ನಗ್ನ ವಿಡಿಯೋಗಳನ್ನು ಅವಳಿಗೆ ಕಳುಹಿಸಿದ್ದಾನೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡ ಮಹಿಳೆ ಯುವಕನಿಗೆ ಬೆದರಿಕೆ ಹಾಕಿದ್ದಾಳೆ.
 
ಹಣ ಕಳುಹಿಸು, ಇಲ್ಲದಿದ್ರೆ.. ನೀನು ಕಳುಹಿಸಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಮಹಿಳೆ ಬೆದರಿಕೆ ಹಾಕಿದ್ದಾಳೆ. ಹಾಗಾಗಿ ಯುವಕ ಮೊದಲು 8 ಸಾವಿರ ರೂಪಾಯಿ ಕಳುಹಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಮಹಿಳೆ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ್ದಾಳೆ. ಇದರಿಂದ ಬೇಸತ್ತ ಸಂತ್ರಸ್ತ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ. ಎಸ್‌ಎಸ್‌ಐ ರಮೇಶ್‌ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ