Publish Date: Tue, 17 Dec 2019 (18:23 IST)
Updated Date: Tue, 17 Dec 2019 (18:24 IST)
ಕುಂದಾನಗರಿಯಲ್ಲಿ ಬೀದಿಗೆ ಇಳಿದ ಜನರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಡಿಮಿಡಿಗೊಂಡರು.
ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ಕಾಯ್ದೆ ತಿದ್ದುಪಡಿಗೆ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದು ರಾಜ್ಯದಲ್ಲೂ ಕೇಂದ್ರದ ನೀತಿ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ಬೆಳಗಾವಿಯಲ್ಲೂ ಕೂಡ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಿಲ್ಲಾ ಕೋಟೆ ಕೆರೆಯಿಂದ ಪ್ರಾರಂಭವಾದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು, ಕೈಗೆ ಕಪ್ಪು ಬಟ್ಟೆ ಕಟ್ಟಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭಾರತ ದೇಶದಲ್ಲಿ ನಾವು ತಪ್ಪು ಮಾಡಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟು ಜನ ತೊಂದರೆ ಅನುಭವಿಸುತ್ತಿದ್ದಾರೆ. ಭಾರತದ ಸಂವಿಧಾನಕ್ಕಿಂತ ಅಮಿತ ಷಾ ಮತ್ತು ಮೋದಿ ದೊಡ್ಡವರಲ್ಲ. ಈಗ ದೇಶದಲ್ಲಿ ಅಂಬೇಡ್ಕರ್ ಅವರ ಸಂವಿಧಾನ ಮುಗಿಸುವ ಕೆಲಸ ಮಾಡುತ್ತಿದ್ದಾರೆ. ದಲಿತರು ಮತ್ತು ಮುಸ್ಲಿಂರು ಕೂಡಿ ಸಂವಿಧಾನ ಉಳಿಸುವ ಕೆಲಸ ಮಾಡಬೇಕು ಅಂತ ಪ್ರತಿಭಟನಾಕಾರರ ಮುಖಂಡರು ಕರೆ ನೀಡಿದ್ರು.