ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಎಲ್ಲ ಭಾಗಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ.
ಮೈಸೂರು, ದಾವಣಗೆರೆ ಹಾಗೂ ಕಲಬುರ್ಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ರಾಜ್ಯ ಘಟಕಕ್ಕೆ ದೆಹಲಿಯಿಂದ ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಹೇಗಾದರೂ ಮಾಡಲು ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ ರಾಜ್ಯ ಘಟಕಕ್ಕೆ ರಾಜ್ಯದ ವಿವಿಧ ಭಾಗಗಳಲ್ಲಿ ಸಮಾವೇಶ ಆಯೋಜಿಸಲು ಸೂಚಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯ ದೃಷ್ಠಿಯಿಂದಲೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಅಗತ್ಯವಾಗಿದ್ದು, ಆದ್ದರಿಂದ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ನಿರಂತರವಾಗಿ ಸೂಚನೆಗಳು ನೀಡುತ್ತಿದೆ. ಮೋದಿ ರಾಜ್ಯಕ್ಕೆ ಬಂದಾಗ ಕಾಂಗ್ರೆಸ್‌ನ ಕೆಲ ಶಾಸಕರು ಬಿಜೆಪಿ ಸೇರಲು ತಯಾರಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಬಿಜೆಪಿ ಅಧಿಕಾರಕ್ಕೆ ಬರುವ ಸಂದೇಶ ರವಾನಿಸಿದಂತಾಗುತ್ತದೆ ಎಂದು ಆಲೋಚನೆ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.