ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತು ಪಡಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.
ಹೊಸಪೇಟೆಯ ಜನಾಶೀರ್ವಾದ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶ್ಮೀರವನ್ನು ನೆಹರೂ ಬಿಟ್ಟುಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪ ಸುಳ್ಳಿನಿಂದ ಕೂಡಿದೆ ಎಂದು ತಿಳಿಸಿದ್ದಾರೆ.
ಇನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ನರೇಂದ್ರ ಮೋದಿ ಅವರು ಹೇಳುತ್ತಾರೆ. ಚಹಾ ಮಾರುವ ವ್ಯಕ್ತಿ ದೇಶದ ಪ್ರಧಾನಮಂತ್ರಿ ಆಗಲು ಕಾಂಗ್ರೆಸ್ ಕಾರಣ. ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡಿದ್ದೇವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.