Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ರಾಜೀನಾಮೆ

Sampriya
ಶನಿವಾರ, 15 ಜೂನ್ 2024 (14:14 IST)
ಬೆಂಗಳೂರು:  ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ  ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ.

ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ. 7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್​ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ  ಪಡೆದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments