ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಕೊರೊನಾಗೆ ದೆಹಲಿಯಲ್ಲಿ ಸಾವನ್ನಪ್ಪಿದ್ದರು. ಆದರೆ ಅವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರದೇ ಇರೋದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗತೊಡಗಿದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ದೆಹಲಿಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಸ್ವಕ್ಷೇತ್ರ ಬೆಳಗಾವಿಗೆ ಯಾಕೆ ತರಲಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಮಿಲಟರಿ ನೆಲೆ ಇದೆ. ಹೆಲಿಕ್ಯಾಪ್ಟರ್‌ನಲ್ಲಿ ಪಾರ್ಥಿವ ಶರೀರ ತರುವ ಮೂಲಕ ಈ ಕ್ಷೇತ್ರದ ಮತದಾರರು ಸುರೇಶ್ ಅಂಗಡಿ ಅವರಿಗೆ ಗೌರವ ಸಲ್ಲಿಸಲು ಅವಕಾಶ ಕೊಡಬೇಕಿತ್ತು ಎಂದಿದ್ದಾರೆ.
ಬೆಳಗಾವಿಗೆ ಕೇಂದ್ರ ಸಚಿವರ ಪಾರ್ಥಿವ ಶರೀರ ತರದೇ ಇರೋದು ಉಪ ಚುನಾವಣೆಯಲ್ಲಿ ಮಹತ್ವದ ವಿಷಯವಾಗಿ ಹೊರ ಹೊಮ್ಮುವ ಸಾಧ್ಯತೆಗಳು ಕಂಡು ಬರುತ್ತಿವೆ.