ರಾಯಚೂರು : ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಕೊಲೆಯಲ್ಲ ಆತ್ಮಹತ್ಯೆ ಎಂಬ ವಿಚಾರ ಇದೀಗ ಸಿಐಡಿ ಮೂಲಗಳಿಂದ ತಿಳಿದುಬಂದಿದೆ.
ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆಯ ವರದಿ ಸಿಐಡಿ ಅಧಿಕಾರಿಗಳ ಕೈಸೇರಿದ್ದು, ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತು ಪತ್ತೆಯಾಗಿಲ್ಲ. ಲೈಂಗಿಕ ದೌರ್ಜನ್ಯದ ಕುರುಹುಗಳು ಕೂಡ ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾದ ಕಾರಣ ಆಕೆಯ ಮೇಲೆ ಅತ್ಯಾಚಾರವಾಗಿಲ್ಲ, ಇದು ಆತ್ಮಹತ್ಯೆ ಎಂದು ತಿಳಿಸಿವೆ.
ಆದಕಾರಣ ಪೊಲೀಸರು ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇ. 14 ರ ವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಯಾದವ್ ಜಾಮೀನಿನ ಮೇಲ ಹೊರಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.