ಮುಂದಿನ ವಿಧಾಸಭೆ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ
ಬೇರೆ ಪಕ್ಷಗಳ ರಣತಂತ್ರಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. 150 ಕ್ಷೇತ್ರಗಳಲ್ಲಿ ಗೆಲುವಿನ ಗುರಿಯಿಂದ ಹಿಂದೆ ಸರಿಯುವುದಿಲ್ಲ. ಮುಂಬರುವ ದಿನಗಳಲ್ಲಿ ಮತ್ತಷ್ಟು ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ತತ್ವ, ಸಿದ್ದಾಂತ ನಂಬಿ ಬರುವವರಿಗೆ ಸ್ವಾಗತವಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ ಬಳಿಕವೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.