ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಗಲುಗನಸನ್ನು ನುಚ್ಚುನೂರು ಮಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ನಡಿದಂತೆ ನಡೆದ ಸರಕಾರ ನಮ್ಮದು. ಪಕ್ಷದ ಕಾರ್ಯಕರ್ತರು, ಮುಖಂಡರು ಎದೆಗುಂದದೆ ಸರಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿ ಎಂದು ಕರೆ ನೀಡಿದರು.
.ಬಿಜೆಪಿಯವರು 150 ಹಾಗೂ ಜೆಡಿಎಸ್‌ನವರು 125 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಇರುವುದು 224 ಕ್ಷೇತ್ರಗಳು ಮಾತ್ರ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಹೇಳಿದ ಹಾಗೇ ಅಷ್ಟೊಂದು ಸ್ಥಾನ ಹೇಗೆ ಗೆಲ್ಲಲು ಸಾಧ್ಯ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ನೀಡದ ಯಾವುದೇ ಭರವಸೆ ಈಡೆರಿಲ್ಲ. ಅವರದು ಸುಳ್ಳು ಭರವಸೆ ಎನ್ನುವುದು ದೇಶದ ಜನತೆಗೆ ಮನದಟ್ಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ