ಬೆಂಗಳೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಆದೇಶ ಹೊರಡಿಸಿದ್ದಾರೆ.
ಈ ತಿಂಗಳ 27 ರ ಮಧ್ಯರಾತ್ರಿ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ಜೊತೆಗೆ ನೈಟ್ ಕರ್ಫ್ಯೂ ಜೊತೆಗೆ 144 ಸೆಕ್ಷನ್ ಸಹ ಜಾರಿಯಲ್ಲಿ ಇರಲಿದೆ. ಆದರೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಮಾತ್ರ ಕರ್ಫ್ಯೂ ಗೆ ವಿನಾಯತಿ ನೀಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಕರ್ಫ್ಯೂ ವೇಳೆ ಅನವಶ್ಯಕವಾಗಿ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಸೆ.27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟು ನಿಟ್ಟಾದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶದಲ್ಲಿ ತಿಳಿಸಿದ್ದಾರೆ.