ಮೈಸೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತಗೊಂಡಿದೆ ಈ ಹಿನ್ನೆಲೆಯಲ್ಲಿ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ ನೀರಿನ ಮಟ್ಟ ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.