Publish Date: Wed, 14 Sep 2022 (11:06 IST)
Updated Date: Wed, 14 Sep 2022 (11:09 IST)
ಉಡುಪಿ : ಜಿಲ್ಲೆಯ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಇಂದ್ರಾಳಿ ಬ್ರಿಡ್ಜ್ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ಗುಂಡಿ ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ಸರ್ಕಾರವನ್ನು ಎಚ್ಚರಿಸಲು ಮುಂದಾದರು.
ಈ ರಸ್ತೆಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಾರೆ.