ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭವಾಗಲಿದೆ. ಹಿಜಾಬ್ ವಿವಾದದ ನಡುವೆಯೇ ದ್ವಿ ತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ.
ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಮತ್ತೊಮ್ಮೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಈ ಕಾರಣದಿಂದ ಹಿಜಾಬ್ ವಿವಾದದಿಂದ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ. ಹಿಜಾಬ್ ಸಂಘರ್ಷದಿಂದ ಪದವಿ ಕಾಲೇಜು ರಜೆ ಹಿನ್ನಲೆ ಮೂರು ದಿನ ತಡವಾಗಿ ಪರೀಕ್ಷೆ ಆರಂಭ ಆಗುತ್ತಿದೆ. ಪ್ರಾಯೋಗಿಕ ಪರೀಕ್ಷೆ ಮುಗಿಸಲು ಮಾರ್ಚ್ 25ರ ವರೆಗೂ ಪದವಿ ಪೂರ್ವ ಮಂಡಳಿ ಅವಕಾಶ ನೀಡಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹಿಜಾಬ್ ವಿವಾದ ಬಹಳಷ್ಟು ಸಮಸ್ಯೆ ಉಂಟುಮಾಡಿದೆ. ಹಲವು ವಿದ್ಯಾರ್ಥಿಗಳು ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಈ ಹಿನ್ನೆಲೆ, ಪರೀಕ್ಷೆಗೆ ಹಾಜರಾಗದಿದ್ದರೆ ಮತ್ತೆ ಸಮಸ್ಯೆ ಉಂಟಾಗಲಿದೆ.