ಪರಿಷತ್ ಸಭಾಪತಿ ಪದಚ್ಯುತಿ ನಿರ್ಣಯಕ್ಕೆ ಸೋಲಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ಗೆ ಹಿನ್ನೆಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಅವಿಶ್ವಾಸ ನಿರ್ಣಯ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಪಕ್ಷ ಜಾತ್ಯಾತೀತ ಶಕ್ತಿಗಳೊಂದಿಗೆ ಸಾಗುವುದು ಬಿಟ್ಟು ಕೋಮುವಾದಿಗಳಿಗೆ ಬೆಂಬಲ ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇವೇಗೌಡರೊಂದಿಗೆ ನಾನು ಮತ್ತು ಪರಮೇಶ್ವರ್ ಮಾತುಕತೆ ನಡೆಸಿದ್ದೇವು. ಜೆಡಿಎಸ್ ಪಕ್ಷದವರು ನಮ್ಮ ಜತೆ ಬರುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಅವರು ಕೋಮುವಾದಿಗಳ ಜತೆ ಕೈಜೋಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರನ್ನು ಚೆನ್ನಾಗಿಯೇ ನೋಡಿಕೊಳ್ಳಲಾಗಿತ್ತು. ಆದಾಗ್ಯೂ ಜೆಡಿಎಸ್ ಪಕ್ಷದವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.