ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಸಭಾಪತಿ ಶಂಕರಮೂರ್ತಿ ಬಿಜೆಪಿ ಪ್ರತಿನಿಧಿಯಾಗಿದ್ದಾರೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅವರ ಕಾರ್ಯವೈಖರಿ ಅಸಮಾಧಾನ ತಂದಿದೆ. ಅವರು ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅವಿಶ್ವಾಸನಿರ್ಣಯ ಮಂಡನೆಗೆ ಅಗತ್ಯವಾದ ಕಾರಣಗಳನ್ನು ಸದನದಲ್ಲಿ ಮಂಡಿಸಲಾಗುವುದು. ನಿರ್ಣಯ ಮಂಡನೆ ಕಾರಣ ಗೊತ್ತಾದಲ್ಲಿ ಜೆಡಿಎಸ್ ಕೂಡಾ ನಿರ್ಣಯಕ್ಕೆ ಬೆಂಬಲ ಸೂಚಿಸಲಿದೆ ಎಂದು ತಿಳಿಸಿದ್ದಾರೆ.
14 ದಿನಗಳೊಳಗಾಗಿ ಅವಿಶ್ವಾಸನಿರ್ಣಯ ಮಂಡನೆ ಸದನದಲ್ಲಿ ಪ್ರಸ್ತಾಪವಾಗಲಿದೆ. ನಾನು ಸಭಾಪತಿ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷ ಸೂಕ್ತವಾದವರನ್ನು ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಲಿದೆ ಎಂದು ವಿವರಣೆ ನೀಡಿದ್ದಾರೆ.
ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಭಾಪತಿ ಶಂಕರಮೂರ್ತಿ, ಯಾವ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೋ ಗೊತ್ತಿಲ್ಲ. ಬಿಜೆಪಿ, ಜೆಡಿಎಸ್ ಒಡಂಬಡಿಕೆಯಿಂದ ಸಭಾಪತಿಯಾಗಿದ್ದೇನೆ. ಅಗತ್ಯವಾದ ಮತಗಳು ನಮ್ಮ ಹತ್ತಿರವಿರುವುದರಿಂದ ನನ್ನ ಸ್ಥಾನಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.