ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಇಂದು ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಆಗಮಿಸಿದ ಪರಮೇಶ್ವರ್, ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ವಿಧಾನಪರಿಷತ್‌ನಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯ ಬಗ್ಗೆ ಚರ್ಚೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸಾಥ್ ನೀಡುವಂತೆ ಮನವಿ ಮಾಡಿದ್ದಾರೆ.
ಇಂದು ಅವಿಶ್ವಾಸ ನಿರ್ಣಯ ಮಂಡನೆಗೆ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿದಲ್ಲಿ ಮಾತ್ರ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಲಿದೆ. ಇಲ್ಲವಾದಲ್ಲಿ ಸಭಾಪತಿ ಸ್ಥಾನ ತೊರೆಯುವುದು ಶಂಕರ್‌ಮೂರ್ತಿಯವರಿಗೆ ಅನಿವಾರ್ಯವಾಗಲಿದೆ.
ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿಯವರ ಕಾರ್ಯವೈಖರಿ ಅಸಮಾಧಾನ ತಂದಿದ್ದರಿಂದ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.