ಸ್ವಾತಂತ್ರ್ಯ ದಿನಾಚರಣೆಗೆ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ!

Webdunia
ಸೋಮವಾರ, 9 ಆಗಸ್ಟ್ 2021 (22:32 IST)
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್‌ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
 
ಭಾರತ ಬಿಟ್ಟು ತೊಲಗಿ ಚಳುವಳಿ ದಿನದ ಅಂಗವಾಗಿ ನಗರದ ಎಂ.ಜಿ. ರಸ್ತೆಯ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮು
ಖ್ಯ ಆಯುಕ್ತ ಗೌರವ್ ಗುಪ್ತ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜರೋಹಣ ನೆರವೇರಿಸಲಿದ್ದಾರೆ. ಕಳೆದ ವರ್ಷದಂತೆ ಈ ಬಾರಿಯೂ ಸಾರ್ವಜನಿಕರ ಪ್ರವೇಶವನ್ನು ತಡೆಯಲಾಗಿದ್ದು, ಗಣ್ಯ ವ್ಯಕ್ತಿಗಳು ಹಾಗೂ ಆಹ್ವಾನಿತರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಿಮೆ ಜನರನ್ನು ಸೇರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎಂಬ ಬಗ್ಗೆ ಶೀಘ್ರವೆ, ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments