Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.