Webdunia - Bharat's app for daily news and videos

Install App

ಹೊರ ರಾಜ್ಯದವರಿಗೆ ನೋ ಎಂಟ್ರಿ

Webdunia
ಶುಕ್ರವಾರ, 29 ಮೇ 2020 (19:41 IST)
ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ವಲಸಿಗರು ಬರುವ ನಿರೀಕ್ಷೆ ಇದ್ದು,  ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಪ್ರವೇಶಕ್ಕೆ ಅನುಮತಿ ನೀಡಬಾರದು.

ಹೀಗಂತ ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಸೇರಿದಂತೆ ಬೇರೆ ರಾಜ್ಯಗಳಿಂದ 35,723 ಜನರು ಬಂದಿದ್ದು, ಅವರನ್ನು 547 ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರೆಂಟೈನಲ್ಲಿಡಲಾಗಿದೆ. ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ.

ವಿಕಾಸಸೌಧದಲ್ಲಿ ಕಲಬುರ್ಗಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತರ್ ರಾಜ್ಯ ಚೆಕ್ ಪೋಸ್ಟ್‍ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್ ನಲ್ಲಿಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments