ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಲ್ಲ. ನನಗೆ ನೋಟಿಸ್ ನೀಡಲು ಸಹ ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಹಿರಂಗವಾಗಿ ಸವಾಲ್ ಎಸೆದಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಿರುವ ಕುರಿತು ನನಗೆ ಮಾಹಿತಿ ಇಲ್ಲ. ಈ ಕುರಿತು ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನಾನು, ಬಿ.ಎಸ್.ಯಡಿಯೂರಪ್ಪ ಅಣ್ಣ-ತಮ್ಮಂದಿರಂತೆ. ಪಕ್ಷ ವಿರೋಧಿ ಕೆಲಸದ ಆರೋಪದ ಮೇಲೆ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಪಕ್ಷದಿಂದ ಅಮಾನತು ಮಾಡಿರುವ ಕುರಿತು ಬಿಎಸ್‌ವೈ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿರೋಧಿಸುತ್ತಿರುವುದು ಯಡಿಯೂರಪ್ಪ ಅವರು ಮಾತ್ರ. ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಲ್ಲ. ನನಗೆ ನೋಟಿಸ್ ನೀಡಲು ಸಹ ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಎಸ್‌ವೈಗೆ ಸವಾಲ್ ಎಸೆದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ