Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಧಾರವಾಡ : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನ ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿನೂ ಅಲ್ಲ, ವಕ್ಫ್ ಬೋರ್ಡ್ಗೆ ಸೇರಿದ್ದೂ ಅಲ್ಲ, ಮುಸ್ಲಿಂ, ಹಿಂದೂಗಳಿಗೆ ಸೇರಿದ್ದೂ ಅಲ್ಲ.
ಅದು ಸರ್ಕಾರದ ಜಾಗ, ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ. ವಿಧಿ ವಿಧಾನದ ಮೂಲಕ ವರ್ಷಕ್ಕೆ 2 ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ, ಹಾಗಾದರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ಎಂದು ಪ್ರಶ್ನಿಸಿದರು.
ಶಾಸಕ ಜಮೀರ್ ಅಹ್ಮದ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀವು ಕೇವಲ ಮುಸ್ಲಿಂ ವೋಟಿನ ಮೇಲೆ ಗೆದ್ದಿಲ್ಲ, ನೀವು ಮುಸ್ಲಿಂರಿಂದ ಮಾತ್ರ ಗೆದ್ದಿಲ್ಲ, ನೀವು ಮುಸ್ಲಿಂ ಶಾಸಕರಲ್ಲ, ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳೂ ವೋಟು ಹಾಕಿದ್ದಾರೆ ನೆನೆಪಿಟ್ಟುಕೊಳ್ಳಿ ಎಂದ ಅವರು, ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು.