ಬೆಂಗಳೂರು : ಅತೃಪ್ತ ಕೈ ಶಾಸಕರಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯುಂಟಾಗಬಾರದು ಎಂಬ ನಿಟ್ಟಿನಲ್ಲಿ ಅತೃಪ್ತರಿಗೆ ಕೆಪಿಸಿಸಿ ಖಡಕ್ ಎಚ್ಚರಿಕೆಯೊಂದನ್ನು ನೀಡಿದೆ.
ಮಾಜಿ ಸಚಿವ ರಾಮಲಿಂಗ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಧಕ್ಕೆ ತರುವಂತಹ ಹೇಳಿಕೆಯನ್ನು ಯಾರೂ ನೀಡಬಾರದು, ಏನೇ ಅಭಿಪ್ರಾಯವಿದ್ದರೂ ಪಕ್ಷದ ಚೌಕಟ್ಟಿನೊಳಗೆ ಹಂಚಿಕೊಳ್ಳಬೇಕು. ಸೀಟು ಹಂಚಿಕೆ ಸಂಬಂಧದಲ್ಲೂ ಅನಾವಶ್ಯಕ ಹೇಳಿಕೆ ಕೊಡಬಾರದು, ಈ ಸೂಚನೆ ಮೀರಿದರೆ ಗಂಭೀರವಾಗಿ ಪರಿಗಣಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿದಂತೆ ಪ್ರಮುಖಗರು ಸಭೆಯಲ್ಲಿ ಭಾಗಿಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.