ಬೆಂಗಳೂರು: ಸಿದ್ದರಾಮಯ್ಯ ಅವರು ಇದೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಎಂದು ಹೇಳುತ್ತಿದ್ದಾರೆ. ಆದರೆ ಅವರು ವಿರುದ್ದ ಲೋಕಾಯುಕ್ತದಲ್ಲಿ 50ಪ್ರಕರಣಗಳು ದಾಖಲಾಗಿವೆ. ಅವೆಲ್ಲ ತನಿಖೆ ಹಂತದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.
ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗುವುದರಲ್ಲಿ ಸಂಶಯವಿಲ್ಲ. ಅದರಿಂದ ರಾಜ್ಯ ಸರ್ಕಾರದಲ್ಲಿ ಈ ಬೆಳವಣಿಗೆ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದರು.
ಇದೀಗ ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.
ಕರ್ನಾಟಕದಲ್ಲಿ ರಾಜಕಾರಣದಲ್ಲಿ ಈ ರೀತಿಯ ಬಿಸಿ ಈ ಹಿಂದೆಂದೂ ನೋಡಿರಲಿಲ್ಲ. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ್ಮೇಲೆ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯ ಕಾರ್ಯವೈಖರಿ ಪ್ರಾರಂಭ ಮಾಡಿದೆ ಈ ಸರ್ಕಾರ. ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂದು ಕಾಲವೇ ನಿರ್ಣಯ ಮಾಡಬೇಕು.<>