Daily Horoscope
✕

ದಕ್ಷಿಣ ಕನ್ನಡದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ...!!!

Webdunia
ಗುರುವಾರ, 4 ಆಗಸ್ಟ್ 2022 (15:58 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ144 ಸೆಕ್ಷನ್ ಬಿಗಿಗೊಳಿಸಲಾಗಿದ್ದು, ಆ.6ರವರೆಗೆ ಮುಂದುವರಿಸಲಾಗಿದೆ. ಈ ನಡುವೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ನಿರಾಕರಿಸಲಾಗಿದೆ.
 
ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರನ್ನು ಹೊರತು ಪಡಿಸಿ ದ್ವಿಚಕ್ರದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರುವ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
 
ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ತನಿಖೆ, ಬಂದೋಬಸ್ತ್, ಶಾಂತಿ ಸುವ್ಯವಸ್ಥೆ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರೇಟ್, ದ.ಕ ಮತ್ತು ಉಡುಪಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಗುರುವಾರ ಸಮಗ್ರ ಮಾಹಿತಿ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
 
ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆ ಕಾರಣದಿಂದ ಈಗಿರುವ ರಾತ್ರಿ ಸಂಚಾರ ನಿರ್ಬಂಧವನ್ನು ಹಂತ ಹಂತವಾಗಿ ಸಡಿಲಿಸಲು ಚರ್ಚಿಸಲಾಗಿದೆ. ರಾತ್ರಿ ನಿರ್ಬಮನಧದ ಅವಧಿಯನ್ನು 2 ಅಥವಾ 3 ಗಂಟೆಗಳಿಗೆ ಹಂತ ಹಂತವಾಗಿ ಕಡಿಮೆಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಎಡಿಜಿಪಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ದರೋಡೆ ಮಾಡಲು ಬಂದ ಖದೀಮ: ಸ್ಥಳದಲ್ಲೇ ಶೂಟ್ ಮಾಡಿ ಬಿಸಾಕಿದ ಭದ್ರತಾ ಸಿಬ್ಬಂದಿ: ಭಯಾನಕ Video

ರೈಲು ಪ್ರಯಾಣದಲ್ಲಿ ಇನ್ಮುಂದೆ ಮೊಬೈಲ್, ಲ್ಯಾಪ್ ಟಾಪ್ ಈ ಸಮಯದಲ್ಲಿ ಚಾರ್ಜ್ ಮಾಡೋ ಹಾಗಿಲ್ಲ: ಕಾರಣವೇನು ಗೊತ್ತಾ

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಹೋದ ಹಿಂದೂ ಕಾರ್ಯಕರ್ತನ ಮೇಲೆ ದಾಳಿ: Viral video

ಸಚಿವ ಸಂಪುಟ ಸಭೆ ಇಂದು: ಕನ್ನಡಿಗರಿಗೆ ಸಿಗುತ್ತಾ ಗುಡ್ ನ್ಯೂಸ್

ನನ್ನ ತಾಯಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ ಎಂದು ಬಂದ ಬಡ ಮಹಿಳೆಗೆ ಅನಂತ್ ಅಂಬಾನಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments