2023ರ ಸೆಪ್ಟೆಂಬರ್ ವೇಳೆಯಲ್ಲಿ ನಗರದ ಪಾದಚಾರಿ ಮಾರ್ಗಗಳ ಮೇಲಿರುವ 1,433 ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಬೆಸ್ಕಾಂ ಹೈಕೋರ್ಟ್‌ಗೆ ಮಾಹಿತಿ ನೀಡಿದೆ .
ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ತೆರವಿಗೆ ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಬೆಸ್ಕಾಂ ಪರ ವಕೀಲರು ಹಾಜರಾಗಿ, ಎರಡು ಹಂತದಲ್ಲಿ ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿದ್ದ ಒಟ್ಟು 5,784 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಅಥವಾ ಅವುಗಳನ್ನು ನೆಲಮಟ್ಟದಿಂದ ಎತ್ತರಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ.