ಚಿತ್ರದುರ್ಗ : ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ಸಂಬಂಧ ಮಂಗಳವಾರ ಸಂತ್ರಸ್ತೆಯರು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇತ್ತ ಶ್ರೀಗಳ ವಿರುದ್ಧ ಕೇಸ್ ದಾಖಲಾದಾಗಿನಿಂದ ಪರ ಹಾಗೂ ವಿರೋಧದ ಚರ್ಚೆಗಳು ಶುರುವಾಗಿವೆ. ಮಂಗಳವಾರ ಸಂಜೆ ವೇಳೆ ಕೋರ್ಟ್ ನಲ್ಲಿ ಸಂತ್ರಸ್ತೆಯರು ಹೇಳಿಕೆ ದಾಖಲು ಮಾಡಿದ್ದಾರೆ. ಸಿಆರ್ ಪಿಸಿ164 ಅಡಿ ಜಡ್ಜ್ ಎದುರು ಹೇಳಿಕೆ ದಾಖಲಿಸಿದ್ದಾರೆ.
ಹೇಳಿಕೆ ದಾಖಲಿಸಿದ ಸೀಲ್ಡ್ ಕವರ್ ನಾಳೆ ತನಿಖಾಧಿಕಾರಿ ಕೈಸೇರಲಿದೆ. ಈ ಮೂಲಕ ನಾಳೆ ಪೊಲೀಸರು ಮುರುಘಾ ಶ್ರೀಗೆ ನೋಟೀಸ್ ನೀಡುವ ಸಾಧ್ಯತೆಗಳಿವೆ. ನಾಳೆ ಮುರುಘಾಶ್ರೀ ವಶಕ್ಕೆ ಪಡೆದು ವಿಚಾರಣೆ ಹಾಗೂ ಮೆಡಿಕಲ್ ಟೆಸ್ಟ್ ನಡೆಯುವ ಸಾಧ್ಯತೆಗಳಿದೆ.
ಇತ್ತ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದು ರಾಜ್ಯಾದ್ಯಂತ ಪರ ಹಾಗೂ ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ ಫೋಕ್ಸೊ ಕೇಸ್ನಲ್ಲಿ ಸಿಲುಕಿರುವ ಮುರುಘಾ ಶರಣರು, ಆರೋಪದಿಂದ ಮುಕ್ತರಾಗುವವರೆಗೆ ಪೀಠ ತ್ಯಾಗ ಮಾಡುವಂತೆ ಮಾಜಿ ಸಚಿವ ಹಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ. ಈ ಸಂಬಂಧ ವಿವಿಧ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದಾರೆ.