ಬೆಂಗಳೂರು: ಕರ್ನಾಟಕ ನಂದಿನಿ ತುಪ್ಪ ಹೊರತುಪಡಿಸಿ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.
ತಿರುಪತಿ ಲಡ್ಡು ತಯಾರಿಕೆ ಮಾಡುವ ಪ್ರಸಾದದಲ್ಲಿ ದನ ಹಾಗೂ ಮೀನಿನ ಕೊಬ್ಬು ದೃಢಪಟ್ಟ ಹಿನ್ನೆಲೆ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ.
ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಇಂತಹ ಬೆಳವಣಿಗೆಯಾದಾಗ ಯಾರನ್ನು ನಂಬಬೇಕು ಎಂಬ ಪ್ರಶ್ನೆ ಎದುರಾಗಿದೆ. ವರದಿ ಬಂದ್ಮೇಲೆ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದರು.