ಹೈಕೋರ್ಟ್& ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೊಲಿಜಿಯಂನ ಶಿಫಾರಸುಗಳಲ್ಲಿ ಕೆಲವನ್ನು ಮಾತ್ರ ಒಪ್ಪಿ, ಇನ್ನುಳಿದವುಗಳನ್ನು ದೀರ್ಘಾವಧಿಗೆ ಬಾಕಿಯುಳಿಸಿಕೊಳ್ಳುವ ಕೇಂದ್ರ ಸರ್ಕಾರದ ಧೋರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆ ತೆಗೆದುಕೊಂಡಿದೆ. ಈ ರೀತಿಯ ಪಿಕ್ & ಚೂಸ್ ನೀತಿಯು ಒಳ್ಳೆಯ ಸಂದೇಶ ರವಾನಿಸುವುದಿಲ್ಲ ಎಂದು ನ್ಯಾಯಪೀಠ ಏಚ್ಚರಿಕೆ ನೀಡಿದೆ.