ಒಕ್ಕಲಿಗ ಸಮುದಾಯ ರಾಜ್ಯದ ಅತ್ಯಂತ ದೊಡ್ಡ ಸಮುದಾಯ. ಜನಸಂಖ್ಯೆಗೆ ಅನುಗುಣವಾಗಿ ಈ ಸಮುದಾಯಕ್ಕೆ ಶೇ.12ರಷ್ಟು ಮೀಸಲಾತಿ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ ಸರಕಾರ ಕೇವಲ ಶೇ.2ರಷ್ಟು ಮಾತ್ರ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆ ಈಡೇರುತ್ತದೆ ಎಂಬ ಆಶಾಭಾವನೆ ಹೊಂದಿದ್ದೇವೆ ಎಂದು ರಾಜ್ಯ ಒಕ್ಕಲಿಗರ ಹೋರಾಟ ಸಮಿತಿ ಅಭಿಪ್ರಾಯಪಟ್ಟಿದೆ.
ಇನ್ನೂ ಒಕ್ಕಲಿಗ ಸಮುದಾಯದ ಧಾರ್ಮಿಕ ಗುರುಗಳ ಮುಖಂಡತ್ವದಲ್ಲಿ ರಾಜ್ಯ ಒಕ್ಕಲಿಗರ ಹೋರಾಟ ಸಮಿತಿಯನ್ನು ರಚಿಸಿಕೊಂಡು ಕಳೆದ ಮೂರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದೆವು. ಆದರೆ ಸರಕಾರ 4 ರಿಂದ 6ಕ್ಕೆ ಏರಿಕೆ ಮಾಡಿದೆ. ಅಂದರೆ ಶೇ.2ರಷ್ಟು ಮಾತ್ರ ಹೆಚ್ಚಳ ಮಾಡಿದೆ. ರಾಜ್ಯದ ಅತಿ ದೊಡ್ಡ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಏನೇನೂ ಸಾಲದು ಎಂದು ರಾಜ್ಯ ಒಕ್ಕಲಿಗರ ಹೋರಾಟ ಸಮಿತಿ ಅಧ್ಯಕ್ಷ ಡಾ. ಗಾ ನಂ ಶ್ರೀಕಂಠಯ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.