ಬೆಂಗಳೂರು: ಕ್ಯಾಬ್ ಚಾಲಕರು ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಅನೇಕ ಪ್ರಕರಣಗಳನ್ನು ಕೇಳಿದ್ದೇವೆ. ಅದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.
ಓಲಾ ಕ್ಯಾಬ್ ಚಾಲಕನೊಬ್ಬ ಪ್ರಯಾಣಿಕ ಮಹಿಳೆ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಸಂತ್ರಸ್ತೆ ಟ್ವಿಟರ್ ನಲ್ಲಿ ವಿವರವಾಗಿ ಬರೆದುಕೊಂಡಿದ್ದಾಳೆ.
ಕೆಲಸ ಮುಗಿಸಿ ಮನೆಗೆ ಮರಳಲು ರಾತ್ರಿ ಓಲಾ ಕ್ಯಾಬ್ ಬುಕ್ ಮಾಡಿದ್ದೆ. ಆದರೆ ಕ್ಯಾಬ್ ನಲ್ಲಿ ಹೋಗುವಾಗ ಚಾಲಕ ಹಸ್ತಮೈಥುನ ಮಾಡಿಕೊಳ್ಳಲು ಶುರು ಮಾಡಿದ. ನಾನು ಗಮನಿಸಿದಾಗ ಮುಚ್ಚಿಕೊಂಡು ಏನೂ ನಡೆದೇ ಇಲ್ಲವೆಂಬಂತೆ ವರ್ತಿಸಿದ. ಬಳಿಕ ಕಿರುಚಾಡಿ ನಾನು ಕ್ಯಾಬ್ ನಿಲ್ಲಿಸಿ ಬೇರೊಂದು ಕ್ಯಾಬ್ ನಲ್ಲಿ ಮನೆಗೆ ಮರಳಿದೆ ಎಂದು ಮಹಿಳೆ ವಿವರಿಸಿದ್ದಾಳೆ.