Publish Date: Fri, 26 Jun 2020 (09:40 IST)
Updated Date: Fri, 26 Jun 2020 (09:41 IST)
ಬೆಂಗಳೂರು : ಹೆಮ್ಮಾರಿ ಕೊರೊನಾಗೆ ಹೆದರಿ 60 ವರ್ಷದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
ವೃದ್ಧೆಗೆ ಜೂನ್ 18ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.