Webdunia - Bharat's app for daily news and videos

Install App

ವರ್ಷಾಚರಣೆ ಮೇಲೆ ಒಮಿಕ್ರಾನ್ ಕರಿನೆರಳು: ಎಂ.ಜಿ ರಸ್ತೆಯಲ್ಲಿ100 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ

Webdunia
ಸೋಮವಾರ, 27 ಡಿಸೆಂಬರ್ 2021 (20:55 IST)
ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಹೊಸವರ್ಷಾಚರಣೆಗೆ ಈಗಾಗಲೇ ಬ್ರೇಕ್ ಬಿದ್ದಿದೆ.
ಸಿಲಿಕಾನ್ ಸಿಟಿಯಲ್ಲಿ ಪ್ರತಿ ವರ್ಷವೂ ಬ್ರಿಗೇಡ್ ರೋಡ್, ಎಂ.ಜಿ. ರೋಡ್‌ಗಳಲ್ಲಿ ಸಂಭ್ರಮದ ವರ್ಷಾಚರಣೆ ನಡೆಯುತ್ತದೆ. ಆದರೆ ಈ ಬಾರಿ ಒಮಿಕ್ರಾನ್ ಆತಂಕ ಹಿನ್ನೆಲೆ ಈ ನಗರಗಳಲ್ಲಿ ಪೊಲೀಸರು ವರ್ಷಾಚರಣೆಗೆ ನಿರ್ಬಂಧ ಇರುವ ಕಾರಣ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಜತೆಗೆ ರಸ್ತೆಗಳಲ್ಲಿ 100 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.
ಎಂ.ಜಿ. ರೋಡ್ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ವರ್ಷಾಚರಣೆ ಮಾಡಲು ಗುಂಪಿನಲ್ಲಿ ಪ್ರತಿ ಬಾರಿ ಯುವಪೀಳಿಕೆ ಆಗಮಿಸುತ್ತದೆ. ಇದರಿಂದ ಹೇಳಲಾರದಷ್ಟು ಜನದಟ್ಟಣೆ ಏರ್ಪಡುತ್ತದೆ. ಇಂಥ ಸ್ಥಳಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಬಣ್ಣಬಣ್ಣದ ದೀಪಗಳ ಬದಲಿಗೆ ಎಂಜಿ ರಸ್ತೆಯಲ್ಲಿ ಸಿಸಿಟಿವಿಗಳು, ಬ್ಯಾರಿಕೇಡ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಲಿದೆ.
ಜನರು ರಸ್ತೆಗೆ ಬರುವುದನ್ನು ತಡೆಯೋದಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಯಲು ಇದೀಗ ಸಮೀಕ್ಷೆ ಕೈಗೊಂಡಿದ್ದೇವೆ. ಚೆಕ್‌ಪೋಸ್ಟ್‌ಗಳು, ಬ್ಯಾರಿಕೇಡ್‌ಗಳನ್ನು ಈಗಾಗಲೇ ಅಳವಡಿಸಲಾಗುತ್ತಿದೆ. ಸಮೀಕ್ಷೆ ವರದಿ ಅನ್ವಯ ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments