Webdunia - Bharat's app for daily news and videos

Install App

ರಾಜ್ಯದಲ್ಲಿ ಒಮೈಕ್ರೋನ್ ಹಾವಳಿ

Webdunia
ಭಾನುವಾರ, 9 ಜನವರಿ 2022 (15:13 IST)
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಶನಿವಾರ 8906 ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,39,958 ಕ್ಕೇರಿದೆ.
 
ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾ ಪ್ರಕರಣಗಳನ್ನು ನೋಡಿದ್ದೇ ಆದರೆ ಹಾವೇರಿ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳಿದ್ದು, ಉಳಿದಂತೆ ಬಾಗಲಕೋಟೆ 6, ಬಳ್ಳಾರಿ 43, ಬೆಳಗಾವಿ 70, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 7,113, ಬೀದರ್ 13, ಚಾಮರಾಜನಗರ 10, ಚಿಕ್ಕಬಳ್ಳಾಪುರ 36, ಚಿಕ್ಕಮಗಳೂರು 22, ಚಿತ್ರದುರ್ಗ 15, ದಕ್ಷಿಣಕನ್ನಡ 295, ದಾವಣಗೆರೆ 12, ಧಾರವಾಡ 56, ಗದಗ 16, ಹಾಸನ 139, ಕಲಬುರಗಿ 58, ಕೊಡಗು 26, ಕೋಲಾರ 65, ಕೊಪ್ಪಳ 03, ಮಂಡ್ಯ 183, ಮೈಸೂರು 203, ರಾಯಚೂರು 4, ರಾಮನಗರ 28, ಶಿವಮೊಗ್ಗ 66, ತುಮಕೂರು 53, ಉಡುಪಿ 186, ಉತ್ತರಕನ್ನಡ 52, ವಿಜಯಪುರ 22 ಪ್ರಕರಣ ಪತ್ತೆಯಾಗಿದೆ.
ಶನಿವಾರ 508 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 29,63,056 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿವೆ.ಇದೆಲ್ಲದರ ನಡುವೆ ಓಮಿಕ್ರಾನ್ ಪ್ರಕರಣವೂ ಏರುಗತಿಯಲ್ಲಿ ಸಾಗುತ್ತಿದ್ದು ಒಟ್ಟು 333 ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments