ರಾಜ್ಯದಲ್ಲಿ ಕೊರೋನಾ ಸೋಂಕಿನ ಜೊತೆಗೆ ಹೊಸ ರೂಪಾಂತರ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆ ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ೨೦೨೨ ರ ಜನವರಿ 05 ರ ವರೆಗೆ ವಿಸ್ತರಿಸಿ ಆದೇಶಿಸಿಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಹಾಗೂ ಓಮಿಕ್ರಾನ್ ವೈರಾಣವನ್ನು ಕಾಳಜಿಯ ರೂಪಾಂತರ ಎಂದು ದೃಢಪಡಿಸಿದೆ. ಈ ಪರಿಸ್ಥಿತಿಯಲ್ಲಿ ಪೂರ್ವಭಾವಿ ಮೇಲ್ವಿಚಾರಣೆ, ಕಣ್ಗಾವಲು ಮತ್ತು ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಹಾಗೂ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟು ನಿಟ್ಟಾಗಿ ಅನುಸರಿಸುವುದು ಅಗತ್ಯ.
ಈ ಎಲ್ಲಾ ಕರಾಣದಿಂದಾಗಿ 03-07-2021ರಲ್ಲಿ ಹೊರಡಿಸಲಾದ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಮತ್ತು ಸದರಿ ಮಾರ್ಗಸೂಚಿಗಳಿಗೆ ಸಂಬಂಧಪಟ್ಟಂತೆ ಹೊರಡಿಸಿರುವ ಆದೇಶಗಳನ್ನು ದಿನಾಂಕ 05-01-2022ರ ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರೆಸಿ ಆದೇಶಿಸಲಾಗಿದೆ.