ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದ ರಾಜ್ಯ ಸರಕಾರ, ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ ಎನ್ನಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಉಭಯ ರಾಜ್ಯಗಳ ನಡುವಿನ ಜಲ ವಿವಾದ ಕುರಿತಂತೆ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಮೂರು ದಿನಗಳ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿತ್ತು.
ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಾಳೆ ನಡೆಯುವ ಸಭೆ ಬಳಿಕ ನಿರ್ಣಯ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ