Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಎಂ ತವರು ಜಿಲ್ಲೆಯಲ್ಲಿ ಸಂಚಲನ: ಎಚ್‌.ವಿಶ್ವನಾಥ್ ಜೆಡಿಎಸ್ ಪಕ್ಷದ ತೆಕ್ಕೆಗೆ

ಸಿಎಂ ತವರು ಜಿಲ್ಲೆಯಲ್ಲಿ ಸಂಚಲನ: ಎಚ್‌.ವಿಶ್ವನಾಥ್ ಜೆಡಿಎಸ್ ಪಕ್ಷದ ತೆಕ್ಕೆಗೆ
ಮೈಸೂರು , ಭಾನುವಾರ, 2 ಜುಲೈ 2017 (12:52 IST)
ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಂಸದ ಎಚ್.ವಿಶ್ವನಾಥ್, ಮಂಗಳವಾರದಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಜ್ಜನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದ ಮಾಜಿ ಸಂಸದ ವಿಶ್ವನಾಥ್, ಕಾಂಗ್ರೆಸ್ ನಾಯಕರ ವರ್ತನೆ, ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ ಎನ್ನಲಾಗಿದೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಅಂಗಳ ಮಾತ್ರ ಬದಲಾಗುತ್ತದೆ ಆಟ ಬದಲಾಗುವುದಿಲ್ಲ. ನನ್ನ ಮನಸ್ಸು ಪ್ರಾದೇಶಿಕ ಪಕ್ಷದತ್ತ ಒಲವು ತೋರುತ್ತಿದೆ. ಜೆಡಿಎಸ್ ಪಕ್ಷದಲ್ಲಿರುವವರು ಎಲ್ಲರು ಚಿರಪರಿಚಿತರಾಗಿದ್ದಾರೆ. ಎಲ್ಲರು ಒಟ್ಟಾಗಿ ಕೆಲಸ ಮಾಡುವ ಆಸೆಯಿದೆ ಎಂದರು.
 
ದೇವೇಗೌಡರು ದೇಶದ ಪರಮೋಚ್ಚ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಜ್ಯದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆಸಿದ್ದಾರೆ. ಅಂತಹ ನಾಯಕ ನಮ್ಮ ರಾಜ್ಯದಲ್ಲಿರುವುದು ನಮ್ಮ ಪುಣ್ಯ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೆ.ಪಿ.ನಂಜುಂಡಿಗೆ ಬಿಜೆಪಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ