ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 9 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಸೆಪ್ಟೆಂಬರ್ 9 ರಂದು ಕರೆದಿರುವ ಬಂದ್ ಕರೆಗೆ ಚಿತ್ರೋದ್ಯಮ, ಹೋಟೆಲ್ ಮಾಲೀಕರ ಸಂಘ, ಉದ್ಯಮಿಗಳ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಅಂದು ಬೆಳಿಗ್ಗೆಯಿಂದಲೇ ವಾಹನ ಸಂಚಾರ, ಹೋಟೆಲ್‌ಗಳು ಮಾಲ್‌ಗಳು ಸೇರಿದಂತೆ ಎಲ್ಲಾ ವಹಿವಾಟು ಸ್ಥಬ್ಧಗೊಳ್ಳಲಿವೆ. ಅನಿವಾರ್ಯವಾಗಿ ಬಂದ್ ಕರೆಯಬೇಕಾಗಿ ಬಂದಿದೆ. ರಾಜ್ಯದ ಜನತೆ ಸಹಕರಿಸಬೇಕು ಎಂದು ಕೋರಿದ್ದಾರೆ.
ಸುಮಾರು ಎರಡು ಲಕ್ಷ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಯಾವುದೇ ಕಾರಣಕ್ಕೂ ಕಾವೇರಿ ನೀರು ಹಂಚಿಕೆ ಅನ್ಯಾಯ ತಡೆಯಲು ಸಾಧ್ಯವಿಲ್ಲ. ನಮ್ಮ ರೈತರು ಕುಡಿಯುವ ನೀರಿಲ್ಲದೇ ಪರದಾಡುತ್ತಿದ್ದರೆ, ಸರಕಾರ ತಮಿಳುನಾಡಿನ ರೈತರ ಬೆಳೆಗಳಿಗಾಗಿ ನೀರು ಹರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ