ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸಿದ್ದಾರೆ.
ಇಂದು ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್ ಉದ್ಘಾಟಿಸಿ ಮಾತನಾಡಿದ ಈಶ್ವರಪ್ಪ, ಬ್ರಿಗೇಡ್, ಬಡವರು, ಶೋಷಿತರ ಏಳಿಗೆಯ ಉದ್ದೇಶ ಹೊಂದಿದೆ. ಬ್ರಿಗೇಡ್ ಪದಾಧಿಕಾರಿಗಳು ಸಮಾಜದ ಪರಿವರ್ತನೆಗಾಗಿ ದುಡಿಯಬೇಕು ಎಂದು ಕರೆ ನೀಡಿದರು.
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಒಪ್ಪಂದದಂತೆ ಯಡಿಯೂರಪ್ಪ ಜಿಲ್ಲಾ ಅಧ್ಯಕ್ಷರುಗಳನ್ನು ಬದಲಿಸುತ್ತಿಲ್ಲ. ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನಗೊಂಡಿರುವ ಈಶ್ವರಪ್ಪ ಇದೀಗ ಬಹಿರಂಗವಾಗಿ ಕಣಕ್ಕೆ ಇಳಿದಿದ್ದಾರೆ.
ಉಪಚುನಾವಣೆಯ ಸೋಲಿನಿಂದಾಗಿ ಯಡಿಯೂರಪ್ಪ ವಿರೋಧಿ ಬಣಗಳಿಗೆ ಮತ್ತಷ್ಟು ಬಲ ಬಂದಂತಾಗಿದ್ದು, ಪಕ್ಷದ ಮೇಲೆ ತಮ್ಮ ಹಿಡಿತವನ್ನು ಮತ್ತಷ್ಟು ಬಲಗೊಳಿಸಲು ಯತ್ನಿಸುತ್ತಿವೆ ಎನ್ನುವ ವರದಿಗಳು ಹರಿದಾಡುತ್ತಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.