Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಜೆಪಿ ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ನೇಮಕ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ನೇಮಕ: ಯಡಿಯೂರಪ್ಪ
ತುಮಕೂರು , ಸೋಮವಾರ, 9 ಜನವರಿ 2017 (14:32 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮರುಕ್ಷಣವೇ 7ನೇ ವೇತನ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
 
ತುಮಕೂರು ಜಿಲ್ಲೆಯ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷ 7ನೇ ವೇತನ ಆಯೋಗ ರಚಿಸುವುದಾಗಿ ಹೇಳಿ ಸರಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ದೂರಿದರು.
 
ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಸರಕಾರಿ ನೌಕರರಿಗೆ 5 ಹಾಗೂ 6ನೇ ವೇತನವನ್ನು ಜಾರಿಗೊಳಿಸಿದ್ದೆ. ಇದನ್ನು ಶಿಕ್ಷಕ ಬಂಧುಗಳು ಮರೆತಿಲ್ಲ. ಶಿಕ್ಷಕರ ಕ್ಷೇತ್ರದ ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದರು.  
 
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೆರೆ ಕಟ್ಟೆಗಳಲ್ಲಿ ನೀರಿಲ್ಲ. ಸರಕಾರ ಮುಂಬರುವ ಮಳೆಯ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕೆರೆಗಳ ಹೂಳು ತೆಗೆಸುವ ಕೆಲಸ ಮಾಡಬೇಕು. ಮಳೆ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯ: ಪರಮೇಶ್ವರ್ ರಾಜೀನಾಮೆಗೆ ಮಹಿಳಾ ಆಯೋಗ ಒತ್ತಾಯ